ಸಮವಸ್ತ್ರದಲ್ಲೇ ನೇಣಿಗೆ ಶರಣಾದ !
ರಾಜ್ಯದಲ್ಲಿ ಮತ್ತೊಬ್ಬ ಡಿವೈಎಸ್ ಪಿ ಗುರುವಾರ ಸಂಜೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಗಳೂರಿನ ಐಜಿ ಕಚೇರಿಯಲ್ಲಿ ಡಿವೈ ಎಸ್ ಪಿಯಾಗಿ ಕೆಲಸ ಮಾಡುತ್ತಿದ್ದ ಕೊಡಗು ಕುಶಾಲನಗರದ ಎಂ ಕೆ ಗಣಪತಿ ಮಡಿಕೇರಿಯ ವಿನಾಯಕ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳಲು ಹಿರಿಯ ಅಧಿಕಾರಿಗಳ ಕಿರುಕುಳವೇ ಕಾರಣ ಎಂದು ಹೇಳಲಾಗಿದೆ. ಗಣಪತಿ ಅವರನ್ನು ಇತ್ತೀಚೆಗೆ ಬೆಂಗಳೂರಿನಿಂದ ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು
ಉದ್ಯಮಿಯನ್ನು ಅಪಹರಣ ಮಾಡಿದ ಆರೋಪ ಎದುರಿಸುತ್ತಿದ್ದ ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಜುಲೈ 5 ಮಂಗಳವಾರ ಮುಂಜಾನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಠಾಣಾ ವ್ಯಾಪ್ತಿಯಲ್ಲಿರುವ ತಮ್ಮ ಮಾವನ ಮನೆಯಲ್ಲಿ ನೇಣಿಗೆ ಶರಣಾಗಿದ್ದರು. ಪೊಲೀಸ್ ಇಲಾಖೆಯಲ್ಲಿ ಎಲ್ಲವೂ ಸರಿಯಿಲ್ಲ ಡಿವೈಎಸ್ಪಿ ಅನುಪಮಾ ಶೆಣೈ ರಾಜೀನಾಮೆಯಿಂದ ಆರಂಭವಾದ ಸರಣಿ ಮುಂದುವರಿಯುತ್ತಲೇ ಇದೆ. ಶೆಣೈ ರಾಜೀನಾಮೆ ನೀಡಿ ಇಲಾಖೆಯಿಂದ ಹೊರಬಂದರೆ ಕಲ್ಲಪ್ಪ ಮತ್ತು ಗಣಪತಿ ಆತ್ಮಹತ್ಯೆಗೆ ಶರಣಾಗಿರುವುದು ಪೊಲೀಸ್ ಇಲಾಖೆಯಲ್ಲಿನ ಹೊಂದಾಣಿಕೆ ಕೊರತೆ ಕತೆಯನ್ನು ಎತ್ತಿ ಹೇಳುತ್ತಿವೆ.
ಮಾಧ್ಯಮಗಳಿಗೆ ಅಷ್ಟೇ ಏಕೆ ಇಡೀ ಕರ್ನಾಟಕದ ಜನತೆಯ ಮುಂದಿರುವ ವಿಡಿಯೋ "ಗಣಪತಿ ಹಿರಿಯ ಅಧಿಕಾರಿಗಳ ಮೇಲೆ ನೇರವಾಗಿ ಆರೋಪ ಮಾಡುತ್ತಿರುವ" ಈ ವೀಡಿಯೋ ಇದ್ದರೂ, ತನಿಖೆ ನಂತರ ಇನ್ನಷ್ಟು ಮಾಹಿತಿ ಹೊರಬೀಳಲಿದೆ ಎನ್ನುವ ನಮ್ಮ ಈ ವ್ಯವಸ್ಥೆಗೆ/ಮಾಧ್ಯಮಗಳು/ರಾಜಕೀಯ ವ್ಯಕ್ತಿಗಳು ಆಡುವ ಉಡಾಫೆ ಮಾತಿಗೆ ಏನಾದರು ಅರ್ಥವಿದೆಯೇ ?
Siddaramaiah/George should Resign/Should not Resign Participate Campaign
Siddaramaiah/George should Resign/Should not Resign Participate Campaign
No comments:
Post a Comment